ಈ ವಾರ ತೆರೆಗೆ ಆಕ್ಟ್ 1978

ಕೊರೋನ ಹಾವಳಿಯ ನಂತರ ಯಾವುದೇ ಹೊಸ ಚಿತ್ರಗಳು ತೆರೆಕಂಡಿರಲಿಲ್ಲ.‌ ಎಂಟು ತಿಂಗಳ ನಂತರ ಇದೇ ನವೆಂಬರ್ 20 ರಂದು ಆಕ್ಟ್ 1978 ಚಿತ್ರ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ. ಡಿ.ಕ್ರಿಯೇಷನ್ಸ್ ಲಾಂಛನದಲ್ಲಿ ಅರ್ ದೇವರಾಜ್ ಅವರು ನಿರ್ಮಿಸಿರುವ ಈ‌ ಚಿತ್ರವನ್ನು ಮಂಸೋರೆ ಕಥೆ ಬರೆದು, ನಿರ್ದೇಶಿಸಿದ್ದಾರೆ.

ಮಂಸೋರೆ, ವೀರೇಶ್ ಮಲ್ಲಣ್ಣ ಹಾಗೂ ದಯಾನಂದ್ ಟಿ ಕೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ರಾಹುಲ್ ಶಿವಕುಮಾರ್ ಸಂಗೀತ ನಿರ್ದೇಶನ, ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ನಾಗೇಂದ್ರ ಕೆ ಉಜ್ಜನಿ ಸಂಕಲನ ಈ ಚಿತ್ರಕ್ಕಿದೆ.

ಯಜ್ಞ ಶೆಟ್ಟಿ, ಪ್ರಮೋದ್ ಶೆಟ್ಟಿ, ಬಿ.ಸರೇಶ್, ಸಂಚಾರಿ ವಿಜಯ್, ಶೃತಿ, ದತ್ತಣ್ಣ, ಅಚ್ಯುತ ಕುಮಾರ್,  ಅವಿನಾಶ್, ಸುಧಾ ಬೆಳವಾಡಿ, ಶೋಭ್ ರಾಜ್, ಶರಣ್ಯ, ನಂದಗೋಪಾಲ್, ರಾಘು ಶಿವಮೊಗ್ಗ, ಕಿರಣ್ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.