ಹಾರರ್ “ಅನಘ” ಬಿಡುಗಡೆಗೆ ಸಿದ್ದ

ಈ ಚಿತ್ರ, ಸಸ್ಪೆನ್ಸ್, ಹಾರರ್, ಕಾಮಿಡಿ ಕಥೆಯ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಿದ್ದವಾಗುತ್ತಿದೆ.

ಕನ್ನಡದಲ್ಲಿ ಮತ್ತೊಂದು ಹಾರರ್ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಆ ಚಿತ್ರದ ಹೆಸರು ಅನಘ. ಚಿತ್ರದ ನಿರ್ದೇಶಕ ರಾಜು, ನಿರ್ಮಾಪಕಿ ಡಿ ಪಿ ಮಂಜುಳ ನಾಯಕ, ನಾಯಕಿ ಸೇರಿದಂತೆ ಬಹುತೇಕ ಹೊಸ ಪ್ರತಿಭೆಗಳೇ ಅಭಿನಯಿಸಿದ ಈ ಚಿತ್ರ, ಸಸ್ಪೆನ್ಸ್, ಹಾರರ್, ಕಾಮಿಡಿ ಕಥೆಯ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಿದ್ದವಾಗುತ್ತಿದೆ.

ಈಗಾಗಲೇ ಅನಘ ಚಿತ್ರದ ಶೂಟಿಂಗ್ ಹಾಗೂ ಸ್ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ ಚಿತ್ರತಂಡ ಸದ್ಯ ಚಿತ್ರದ ಪ್ರೊಮೋಷನ್ ಮತ್ತು ಬಿಡಯಗಡೆಯ ಸಿದ್ದತೆ ಮಾಡಿಕೊಳ್ಳುತ್ತಿದೆ.

ಈ ಚಿತ್ರದಲ್ಲಿ ರಂಗಭೂಮಿ ಪ್ರತಿಭೆಗಳಾದ ನಳೀನ್ ಕುಮಾರ್ ಮತ್ತು ಪವನ್ ಪುತ್ರ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಪೋಷಕ ಪಾತ್ರದಲ್ಲಿ ಸಿಲ್ಲಿ ಲಲ್ಲಿ ಖ್ಯಾತಿಯ ಶ್ರೀನಿವಾಸ್ ಗೌಡ್ರು, ಕಿರಣತೇಜ, ಕಿರಣ್ ರಾಜ್, ಕರಣ್ ಆರ್ಯನ್, ದೀಪ, ಖುಷಿ, ರಶ್ಮಿ, ವಿಶೇಷ ಪಾತ್ರದಲ್ಲಿ ನಂಜಪ್ಪ ಬೆನಕ ರಂಗಭೂಮಿ ಮತ್ತು ಹಾಸ್ಯ ಪಾತ್ರದಲ್ಲಿ ಮೋಟು ರವಿ, ಅಭಿ ಕಾಣಿಸಿಕೊಂಡಿದ್ದಾರೆ.

ನಿದೇ೯ಶಕ ರಾಜು ಎನ್. ಆರ್. ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ಹಾಕಿದ್ದು, ಬೆಂಗಳೂರು ಹಾಗೂ ದೇವರಾಯನ ದುಗ೯ ಸುತ್ತ ಮುತ್ತ ಚಿತ್ರಿಕರಿಸಿದ್ದಾರೆ, ಈ ಚಿತ್ರಕ್ಕೆ ಶಂಕರ್ ಅವರ ಕ್ಯಾಮೆರಾ ಕೈಚಳಕ ಇದ್ದು, ಅವಿನಾಶ್ ಸಂಗೀತ ನೀಡಿದ್ದಾರೆ, ಸಂಕಲನ ವೆಂಕಿ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮಾಡಿದ್ದಾರೆ. ಅಂದುಕೊಂಡಂತೆ ಆದರೆ ಸದ್ಯದಲ್ಲೇ ಈ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ.