ಅನುಶ್ರೀಗೆ ಇದೆಲ್ಲ ಬೇಕಿತ್ತಾ ಅಯ್ಯೋ….

ಸ್ಯಾಂಡಲ್ ವುಡ್ ಡ್ರಗ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ನಿರೂಪಕಿ ಅನುಶ್ರೀ ಗೂ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ನಡೆಯುತ್ತಿದೆ ಎಂಬಾ ಹೇಳಿಕೆಯ ಬೆನ್ನಲ್ಲೇ ರಾಗಿಣಿ, ಸಂಜನಾ ಈಗಾಗಲೇ ಪರಪ್ಪನ ಅಗ್ರಹಾರದಲ್ಲಿ ಇದ್ದು ಇವರೊಂದಿಗೆ ಹಲವಾರು ಆರೋಪಿಗಳನ್ನು ಬಂಧಿಸಲಾಗಿತ್ತು.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ಅವರನ್ನು ಬಂಧಿಸಿದ್ದರು. ತರುಣ್ ನನ್ನು ವಿಚಾರಣೆ ನಡೆಸಿ ಆತ ಸಿಸಿಬಿ ಪೊಲೀಸರಿಗೆ ನಿರೂಪಕಿ ಅನುಶ್ರೀ ಅವರ ಹೆಸರನ್ನು ಬಾಯ್ಬಿಟ್ಟಿದ್ದ ಎನ್ನಲಾಗಿದೆ. ಡ್ರಗ್ಸ್ ವಿಚಾರದಲ್ಲಿ ತನಿಖೆಗಾಗಿ ಮಂಗಳೂರು 4- 5 ಸಿಸಿಬಿ ಪೊಲೀಸರ ತಂಡ ಗುರುವಾರ ಬೆಂಗಳೂರಿಗೆ ತೆರಳಿತ್ತು.

ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬರುವಂತೆ ಸಿಸಿಬಿ ನೋಟಿಸ್ ನೀಡಿದ್ದು, ನಾನು ಹಾಜರಾಗಲು ಮಂಗಳೂರಿಗೆ ಹೋಗುತ್ತಿದ್ದೇನೆ. ಅವರು ವಿಚಾರಣೆಗೆ ಮಾತ್ರ ಕರೆದಿರುವುದು. ಹಾಗಂದ ಮಾತ್ರಕ್ಕೆ ನಾನು ಅಪರಾಧಿಯಲ್ಲ ಎಂದು ನಟಿ, ನಿರೂಪಕಿ ಅನುಶ್ರೀ ಹೇಳಿದ್ದಾರೆ. ಆದರೆ ಕೆಲವು ಮಾಧ್ಯಮಗಳಲ್ಲಿ ನಾನು ನಟಿಸಿದ ದೃಶ್ಯಗಳನ್ನು ತೋರಿಸಿ ನನ್ನನ್ನು ಅಪರಾಧಿ ಎಂಬಂತೆ ಬಿಂಬಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ನನ್ನದೇನೂ ಪಾತ್ರವಿಲ್ಲ ಎಂದಿದ್ದಾರೆ. ಈ ಸುದ್ದಿ ಇಷ್ಟವಾದಲ್ಲಿ ಇದನ್ನು ಲೈಕ್ ಮಾಡಿ ಶೇರ್ ಮಾಡಿ ಹಾಗು ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ತಪ್ಪದೆ ತಿಳಿಸಿ. ಕನ್ನಡ ಚಿತ್ರಗಳ ಬಗ್ಗೆ, ಕನ್ನಡ ನಾಡಿನ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ತಪ್ಪದೆ ಲೈಕ್ ಮಾಡಿರಿ.