ಡಬ್ಬಿಂಗ್ ಮುಗಿಸಿದ ಚಡ್ಡಿದೋಸ್ತ್’ಗಳು

ರೆಡ್ ಅಂಡ್ ವೈಟ್ ಖ್ಯಾತಿಯ ಸೆವೆನ್ ರಾಜ್ ನಿರ್ಮಾಣದ, ಆಸ್ಕರ್ ಕೃಷ್ಣ ನಟಿಸಿ, ನಿರ್ದೇಶಿಸಿರುವ  “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ” ಚಿತ್ರದ ಡಬ್ಬಿಂಗ್ ಕೆಲಸ ಪೂರ್ಣಗೊಂಡಿದೆ. ಇತ್ತೀಚೆಗಷ್ಟೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡ ಚಿತ್ರತಂಡವು ಉಲ್ಲಾಳ ದಲ್ಲಿರುವ ‘ಸಿನಿಮನೆ’ ಸ್ಟುಡಿಯೋದಲ್ಲಿ ಡಬ್ಬಿಂಗ್ ಕಾರ್ಯವನ್ನು ಸಂಪೂರ್ಣಗೊಳಿಸಿ, ಚಿತ್ರವನ್ನು ಸೆನ್ಸಾರ್ ಗೆ ಕಳಿಸುವ ಪ್ರಕ್ರಿಯೆಯಲ್ಲಿದೆ. ಕೌಂಡಿನ್ಯ ರವರ ಕಾದಂಬರಿಗೆ ಚಿತ್ರಕಥೆ, ಸಂಭಾಷಣೆ ಬರೆಯುವುದರ ಜೊತೆಗೆ ಅತಿಮುಖ್ಯ ಪಾತ್ರವೊಂದನ್ನೂ ನಿಭಾಯಿಸಿದ್ದಾರೆ ಲೋಕೇಂದ್ರ ಸೂರ್ಯ. ಮಲಯಾಳಿ ಚೆಲುವೆ ಗೌರಿ ನಾಯರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಅನಂತ್ ಆರ್ಯನ್ ಸಂಗೀತ, ಗಗನ್ ಕುಮಾರ್ ಛಾಯಾಗ್ರಹಣ, ಮರಿಸ್ವಾಮಿ ಸಂಕಲನ, ಅಕುಲ್ ರವರ ನೃತ್ಯ ಹಾಗೂ ವೈಲೆಂಟ್ ವೇಲು ಸಾಹಸ ನಿರ್ದೇಶನವಿರುವ ಈ ಚಿತ್ರವು ಶೀಘ್ರದಲ್ಲಿಯೇ ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿದೆ.