ಹಲವು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರ ಪ್ರದರ್ಶನ.

ಇತ್ತೀಚೆಗೆ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳು ಕನ್ನಡದಲ್ಲಿ ಸಾಕಷ್ಟು ಬರುತ್ತಿದೆ.‌ ಅದರಲ್ಲಿ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರವು ಒಂದು.‌

ಚಿತ್ರತಂಡದಿಂದ ಸಂತಸದ ಸುದ್ದಿ ಹೊರಬಂದಿದೆ.‌ ಕನ್ನಡ ಚಿತ್ರರಂಗ ಇದೀಗಬೇರೆ ಭಾಷಾ ಚಿತ್ರರಂಗಗಳಿಗೆ ಹೋಲಿಸಿದರೆ ತುಸು ಗುಣಮಟ್ಟದ ಚಿತ್ರಗಳನ್ನೇ ಕೊಡುತ್ತ ಬಂದಿವೆ. ಅಷ್ಟೇ ಅಲ್ಲ ಸಾಕಷ್ಟು ವಿಭಿನ್ನ ಸಿನಿಮಾಗಳ ಮೂಲಕ ಗಮನಸೆಳೆಯುತ್ತಿರುವುದು ಕೂಡ ಖುಷಿಯ ವಿಚಾರ. ಈಗಾಗಲೇ ಕನ್ನಡದ ಬಹುತೇಕ ಸಿನಿಮಾಗಳು ಈಗ ಗಡಿ ದಾಟಿವೆ. ಸಾಗರದಾಚೆಯೂ ಹೋಗಿವೆ‌ ಹಲವು ರಾಜ್ಯ, ರಾಷ್ಟ್ರ , ಅಂತಾರಾಷ್ಟ್ರೀಯ ಮಟ್ಟದ ಚಿತ್ರೋತ್ಸವಗಳಲ್ಲೂ ಆಯ್ಕೆಯಾಗಿ ಮೆಚ್ಚುಗೆ ಪಡೆದಿವೆ.ಈಗ ಅಂಥದೊಂದು ಖುಷಿ ವಿಚಾರಕ್ಕೆ ಕನ್ನಡ ಸಿನಿಮಾವೊಂದು ಕಾರಣವಾಗಿದೆ. ಹೌದು, ಆ ಕನ್ನಡ ಸಿನಿಮಾ ಒಂದಲ್ಲ ಎರಡಲ್ಲ ಬರೋಬರಿ 6 ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಆಯ್ಕೆಯಾಗಿದೆ. ಅದು ” ದಾರಿ ಯಾವುದಯ್ಯಾ ವೈಕುಂಠಕೆ ” ಸಿದ್ದು ಪೂರ್ಣಚಂದ್ರ ನಿರ್ದೇಶನದ ಈ ಚಿತ್ರ ಸಧ್ಯ ಸುದ್ದಿ ಮಾಡುತ್ತಿದೆ.

#ರಾಜಸ್ಥಾನ ಅಂತರಾಷ್ಟ್ರೀಯ ಚಿತ್ರೋತ್ಸವ

#ನಾವ್ಢ ಅಂತರಾಷ್ಟ್ರೀಯ ಚಿತ್ರೋತ್ಸವ

# ಕಲರ್ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್

# ಬೆಟ್ಟಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವ

# 5th ಇಂಡಿಯನ್ ವರ್ಲ್ಡ್ ಫಿಲ್ಮ್ ಫೆಸ್ಟಿವಲ್

# ಇಂಡಿಯನ್ ಇಂಟರ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಸೇರಿದಂತೆ ‍6 ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಈ ಚಿತ್ರ ಆಯ್ಕೆಯಾಗಿದೆ. ಸದ್ಯದಲ್ಲೇ ಆಯಾ ಚಿತ್ರೋತ್ಸವದಲ್ಲಿ ಜ್ಯೂರಿಗಳು ಈ ಚಿತ್ರವನ್ನು ವೀಕ್ಷಿಸಲಿದ್ದಾರೆ. ಇಷ್ಟರಲ್ಲೇ ನೆಚ್ಚಿನ ಚಿತ್ರಮಂದಿರಗಳಲ್ಲೂ ಚಿತ್ರ ಬಿಡುಗಡೆಯಾಗಲಿದೆ.

ದೊಡ್ಡ ಕ್ರಿಮಿನಲ್ ವ್ಯಕ್ತಿಗೆ ಭಾವನೆಗಳ ಸ್ಪರ್ಶ ಕೊಟ್ಟರೆ ಅವನಲ್ಲಾಗುವ ಮಾನಸಿಕ ಬದಲಾಣೆಗಳ ಕ್ರೂಡಿಕರಣವೇ ದಾರಿ ಯಾವುದಯ್ಯಾ ವೈಕುಂಠಕೆ ಚಿತ್ರದ ಕಥಾಸಾರಾಂಶ.

ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ ‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರವನ್ನು ಸಿದ್ದು ಪೂರ್ಣಚಂದ್ರ ನಿರ್ದೇಶಿಸಿದ್ದಾರೆ. ವರ್ಧನ್ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಅನುಷ, ‘ತಿಥಿ’ ಚಿತ್ರದ ಖ್ಯಾತಿ ಪೂಜಾ, ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅರುಣ್‌ ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ, ಸ್ಪಂದನ ಪ್ರಸಾದ್, ದಯಾನಂದ್. ಸುಚಿತ್, ಮೈಸೂರು ಬಸವರಾಜ್ ಮುಂತಾದವರಿದ್ದಾರೆ. ಲೋಕಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿತಿನ್ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನವಿದೆ.