ರಿಷಬ್ ಶೆಟ್ಟಿ ಅಭಿನಯದ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ರಿಷಬ್ ಶೆಟ್ಟಿ ಫಿಲಂಸ್ ಸಹಯೋಗದೊಂದಿಗೆ ನಿರ್ಮಿಸುತ್ತಿರುವ, ನಿರ್ದೇಶಕ – ನಟ ರಿಷಬ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ಚಿತ್ರ ‘ಹರಿಕಥೆ ಅಲ್ಲ ಗಿರಿಕಥೆ’. ಕರಣ್ ಅನಂತ್ ಹಾಗೂ‌ ಅನಿರುದ್ಧ್ ಮಹೇಶ್ ಜಂಟಿಯಾಗಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಅಕ್ಟೋಬರ್ 1 ರಿಂದ ಡಿಸೆಂಬರ್ 20 ರವರೆಗೂ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆದಿದೆ. ಡಿಸೆಂಬರ್ 26 ರಿಂದ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ, ಜನವರಿ 2ರಿಂದ ಗೋವಾದಲ್ಲಿ, ಆನಂತರ ಮಡಿಕೇರಿಯಲ್ಲಿ ದ್ವಿತೀಯ ಹಂತದ ಚಿತ್ರೀಕರಣ ನಡೆಯಲಿದೆ.

ಗಿರಿಕೃಷ್ಣ ಕಥೆ ಹಾಗೂ ರಿಷಬ್ ಶೆಟ್ಟಿ, ಅನಿರುದ್ಧ್ ಮಹೇಶ್, ಕರಣ್ ಅನಂತ್ ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಅನಿರುದ್ಧ್ ಮಹೇಶ್ ಮಾತು ಬರೆದಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಚಂದ್ರಶೇಖರನ್ , ರಂಗನಾಥ್ ಸಿ.ಎಂ ಛಾಯಾಗ್ರಹಣ, ಪ್ರಗತಿ ರಿಷಬ್ ಶೆಟ್ಟಿ ವಸ್ತ್ರ ವಿನ್ಯಾಸ ಹಾಗೂ ರಿತ್ವಿಕ್ ಅವರ ಸಂಕಲನ ಈ ಚಿತ್ರಕ್ಕಿದೆ. ಧರಣಿ ಗಂಗೆಪುತ್ರ ಚಿತ್ರದ ನಿರ್ಮಾಣ ವಿನ್ಯಾಸಕರಾಗಿದ್ದು, ಪ್ರಮೋದ್ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ರಿಷಬ್ ಶೆಟ್ಟಿ, ರಚನಾ ಇಂದರ್, ತಪಸ್ವಿನಿ ಪೊನ್ನಚ್ಚ, ಹೊನ್ನವಳ್ಳಿ ಕೃಷ್ಣ, ಪ್ರಮೋದ್ ಶೆಟ್ಟಿ ಮುಂತಾದವರು ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರದ ತಾರಾಬಳಗದಲ್ಲಿದ್ದಾರೆ.