ಮಲೆಯಾಳಂ ನಲ್ಲಿ ‘ಕಾಲಚಕ್ರ’

ವಸಿಷ್ಠ ಎನ್ ಸಿಂಹ ನಾಯಕರಾಗಿ ಅಭಿನಯಿಸಿರುವ ‘ಕಾಲಚಕ್ರ’ ಚಿತ್ರ ಮಲೆಯಾಳಂನಲ್ಲೂ ನಿರ್ಮಾಣವಾಗುತ್ತಿದೆ. ‘ಕಾಲಚಕ್ರ’ ಚಿತ್ರದ ರಿಮೇಕ್ ಹಕ್ಕು ಮಲೆಯಾಳಂ ಭಾಷೆಗೆ ಮಾರಾಟವಾಗುತ್ತಿದೆ. ಮಲೆಯಾಳಂ ಚಿತ್ರರಂಗದ ಖ್ಯಾತ ನಿರ್ಮಾಪಕರೊಬ್ಬರು ‘ಕಾಲಚಕ್ರ’ ಚಿತ್ರದ ಕಥೆ ಇಷ್ಟಪಟ್ಟು ಮಲೆಯಾಳಂ ನಲ್ಲಿ ಚಿತ್ರನಿರ್ಮಾಣ ಮಾಡಲು ಮುಂದಾಗಿದ್ದಾರೆ.
ಮಲೆಯಾಳಂ ನಲ್ಲಿ ಚಿತ್ರ ನಿರ್ಮಿಸುತ್ತಿರುವ ಸಂಸ್ಥೆ ಯಾವುದು? ಯಾವಾಗ ಪ್ರಾರಂಭವಾಗುತ್ತದೆ? ಯಾರು ಅಭಿನಯಿಸುತ್ತಾರೆ ಎಂಬ ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ.

ಅಕ್ಟೋಬರ್ 19ರಂದು ವಸಿಷ್ಠ ಸಿಂಹ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ನಟಿಸಿರುವ ಚಿತ್ರದ ರಿಮೇಕ್ ಹಕ್ಕು ಮಲೆಯಾಳಂ ಗೆ ಮಾರಾಟವಾಗುತ್ತಿರುವುದು ನಿಜಕ್ಕೂ ಸಂತಸದ ವಿಷಯ. ವಸಿಷ್ಠ ಸಿಂಹ ನಾಲ್ಕು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯದಲ್ಲೇ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್ ಅಪಾರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ , ವಸಿಷ್ಠ ಸಿಂಹ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ.

ಸುಮಂತ್ ಕ್ರಾಂತಿ ನಿರ್ಮಾಣ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಸೈಕಲಾಜಿಕಲ್ ಕಥಾ ಹಂದರ ಹೊಂದಿದೆ.
ಗುರುಕಿರಣ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಚೇತನ್ ಕುಮಾರ್, ಕವಿರಾಜ್, ಸಂತೋಷ್ ನಾಯಕ್ಬ ರೆದಿದ್ದಾರೆ. ಸಂಚಿತ್ ಹೆಗ್ಡೆ, ಕೈಲಾಷ್ ಖೇರ್, ಪಂಚಮ್ ಜೀವ ಹಾಡಿದ್ದಾರೆ. ಎಲ್ ಎಂ ಸೂರಿ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ, ಡಿಫರೆಂಟ್ ಡ್ಯಾನಿ‌ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ.  ವಸಿಷ್ಠ ಎನ್ ಸಿಂಹ, ರಕ್ಷ, ದೀಪಕ್ ಶೆಟ್ಟಿ, ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.