ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರ.
ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.
ಕಸ್ತೂರಿ ಮಹಲ್ ನಲ್ಲಿ ಶಾನ್ವಿ ಶ್ರೀವಾಸ್ತವ್.
ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.
ಕಸ್ತೂರಿ ನಿವಾಸ ಅಲ್ಲ ಕಸ್ತೂರಿ ಮಹಲ್
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶಿಸುತ್ತಿದ್ದಾರೆ. ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ. ಶ್ರೀಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ
ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ.
_ _ _ತೀಟೆಗೆ ಇಡೀ ಚಂದನವನಕ್ಕೇ ಕಾಡ್ಗಿಚ್ಚು ಹಚ್ಚಬೇಡಿ
ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನ ಕಸ್ತೂರಿ ಮಹಲ್ ಚಿತ್ರಕ್ಕಿದೆ. ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್, ಅಕ್ಷರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಸುದ್ದಿ ಇಷ್ಟವಾದಲ್ಲಿ ಇದನ್ನು ಲೈಕ್ ಮಾಡಿ ಶೇರ್ ಮಾಡಿ ಹಾಗು ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ತಪ್ಪದೆ ತಿಳಿಸಿ. ಕನ್ನಡ ಚಿತ್ರಗಳ ಬಗ್ಗೆ, ಕನ್ನಡ ನಾಡಿನ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ತಪ್ಪದೆ ಲೈಕ್ ಮಾಡಿರಿ.