ಮುತ್ತಪ್ಪ ರೈ ಚಿತ್ರ ನಾನೇ ಮಾಡುತ್ತೇನೆ; ಕಾಲೇಜ್ ಕುಮಾರ ಸಿನಿಮಾ ನಿರ್ಮಾಪಕ ಪದ್ಮನಾಭ್

ಆ ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರೊಂದಿಗೆ ಸಿನಿಮಾ ಕೈಬಿಡುವಂತೆ ಚರ್ಚೆ ಮಾಡಿದ್ದೇನೆ. ಅವರಿಂದಲೂ ಸಮ್ಮತಿ ಸಿಕ್ಕಿದೆ. ಕೊಂಚ ಕಾಲಾವಕಾಶವನ್ನೂ ಕೇಳಿದ್ದಾರೆ.

ನಾನು, ನಿರ್ಮಾಪಕ ಎಲ್ ಪದ್ಮನಾಭ್, ಈಗಾಗಲೇ ನನ್ನ ಗಮನಕ್ಕೆ ಬಾರದೆ, ನಾನು ವಿದೇಶದಲ್ಲಿ ಇದ್ದ ಕಾರಣ, ಎಂಆರ್ ಸಿನಿಮಾ ಮುಹೂರ್ತ ಆಗಿರುವುದು ಗೊತ್ತಾಗಿಲ್ಲ. ಹೀಗಾಗಿ, ಮುತ್ತಪ್ಪ ರೈ ಕುರಿತ ಚಿತ್ರವನ್ನು ನಾನೇ ನಿರ್ಮಿಸಬೇಕಿದೆ. ಈಗಾಗಲೇ ಈ ಹಿಂದೆ ಈ ಬಗ್ಗೆ ಒಂದು ಪತ್ರಿಕಾಗೋಷ್ಟಿಯನ್ನೂ ನಾನು ಮಾಡಿದ್ದೆ. ಅವರಿದ್ದಾಗಲೇ ಬಹುಭಾಷೆಯಲ್ಲಿ ಈ ಚಿತ್ರ ಮಾಡುವ ಬಗ್ಗೆ ಚರ್ಚೆಯಾಗಿತ್ತು. ರಾಮ್ ಗೋಪಾಲ್ ವರ್ಮಾ ಹಿಂದೆ ಸರಿದ ಬಳಿಕ ನಾನೇ ನಮ್ಮ ಎಂಆರ್ ಬ್ಯಾನರ್ ನಲ್ಲಿ ಈ ಚಿತ್ರವನ್ನು ಬಹುಭಾಷೆಯಲ್ಲಿ ನಿರ್ಮಾಣ ಮಾಡುವ ಬಗ್ಗೆ ಪ್ರಕ್ರಿಯೆ ಈ ಮೊದಲೇ ಶುರುವಾಗಿತ್ತು. ನನ್ನ ಎಂಆರ್ ಪಿಕ್ಚರ್ಸ್ ಸಂಸ್ಥೆ ಹುಟ್ಟುಹಾಕಿದ್ದೆ ಅದರ ಸಲುವಾಗಿ. ಅಷ್ಟೇ ಅಲ್ಲ, ರೈ ಅಣ್ಣನ ಬಗ್ಗೆ ಸಿನಿಮಾ‌ ಪ್ರಾಜೆಕ್ಟ್ ಕೈಗೆತ್ತಿಕೊಂಡರೆ ಅದಕ್ಕೆ ಅನುಮತಿ ಪಡೆಯಲೇಬೇಕಿದೆ. ಇದೀಗ ನಿರ್ದೇಶಕ ರವಿ ಶ್ರೀವತ್ಸ ಅವರು ಸಿನಿಮಾ ಘೋಷಣೆ ಮಾಡಿಕೊಂಡು ಮುಹೂರ್ತವನ್ನೂ ಮಾಡಿಕೊಂಡಿದ್ದಾರೆ. ಆ ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರೊಂದಿಗೆ ಸಿನಿಮಾ ಕೈಬಿಡುವಂತೆ ಚರ್ಚೆ ಮಾಡಿದ್ದೇನೆ. ಅವರಿಂದಲೂ ಸಮ್ಮತಿ ಸಿಕ್ಕಿದೆ. ಕೊಂಚ ಕಾಲಾವಕಾಶವನ್ನೂ ಕೇಳಿದ್ದಾರೆ. ಅವರು ಕೈಬಿಟ್ಟ ಬಳಿಕ ಅವರ ಸಿನಿಮಾ ಕಥೆ ಕೇಳುತ್ತೇನೆ. ಒಬ್ಬ ನಿರ್ಮಾಪಕನಾಗಿ ಮತ್ತೊಬ್ಬ ನಿರ್ಮಾಪಕನ ಸಮಸ್ಯೆ ನನಗೆ ಗೊತ್ತು. ಹಾಗಾಗಿ, ಶೂಟಿಂಗ್ ಶುರುವಾಗುವುದಕ್ಕೂ ಮುನ್ನ ಅವರ ಗಮನಕ್ಕೆ ತರುವುದು ಒಳಿತು ಎನ್ನುವ ಕಾರಣಕ್ಕೆ ಅವರೊಂದಿಗೆ ಚರ್ಚಿಸಿದ್ದೇನೆ. ಸದ್ಯ ಸಾಕಷ್ಟು ಸಿನಿಮಾಗಳು ಸೆನ್ಸಾರ್ ಆಗಿವೆ. ಅವುಗಳ ಬಿಡುಗಡೆ ಪ್ರಕ್ರಿಯೆ ಶುರುವಾಗಲಿ. ಇನ್ನು ಕೆಲ ದಿನಗಳ ಬಳಿಕ ಆ ಚಿತ್ರವನ್ನು ನಾನೇ ಘೋಷಣೆ ಮಾಡಲಿದ್ದೇನೆ. ಎಂಆರ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ನಾನೇ ನಿರ್ಮಾಣ ಮಾಡಲಿದ್ದೇನೆ.

ಧನ್ಯವಾದಗಳೊಂದಿಗೆ
ಎಲ್. ಪದ್ಮನಾಭ್, ನಿರ್ಮಾಪಕ