“ಪದವಿಪೂರ್ವ” ಚಿತ್ರಕ್ಕೆ ‘ರಾಮ ರಾಮ ರೇ’ ಖ್ಯಾತಿಯ ಪ್ರತಿಭಾನ್ವಿತ ನಟ ‘ನಟರಾಜ್’

ನಟರಾಜ್ ಅವರು ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದು, ಅದಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡು ತಂಡದ ಉತ್ಸಾಹ ಮತ್ತು ಕಾರ್ಯವೈಖರಿಗೆ ಮಾರುಹೋಗಿದ್ದಾರೆ.

ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ರವರ ಜಂಟಿ ನಿರ್ಮಾಣದಲ್ಲಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ “ಪದವಿಪೂರ್ವ” ಚಿತ್ರಕ್ಕೆ ‘ರಾಮ ರಾಮ ರೇ’ ಖ್ಯಾತಿಯ ಪ್ರತಿಭಾನ್ವಿತ ನಟ ‘ನಟರಾಜ್’ ಅವರ ಪ್ರವೇಶವಾಗಿದೆ. ನಟರಾಜ್ ಅವರು ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದು, ಅದಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡು ತಂಡದ ಉತ್ಸಾಹ ಮತ್ತು ಕಾರ್ಯವೈಖರಿಗೆ ಮಾರುಹೋಗಿದ್ದಾರೆ.

ಚಿತ್ರದ ಎರಡನೇ ಹಂತದ ಚಿತ್ರೀಕರಣವು ಕೇವಲ ನಾಲ್ಕು ದಿನಗಳ ಹಿಂದೆಯಷ್ಟೇ ಪೂರ್ಣಗೊಂಡಿದ್ದು, ಮಲೆನಾಡಿನ ಸುತ್ತಮುತ್ತಲಿನ ಅತ್ಯಂತ ಸುಂದರ ತಾಣಗಳಲ್ಲಿ ದೃಶ್ಯಗಳ ಹಾಗೂ ಹಾಡುಗಳ ಚಿತ್ರೀಕರಣ ನಡೆಸಿ ಬೆಂಗಳೂರಿಗೆ ವಾಪಸ್ಸಾಗಿರುವ ಚಿತ್ರತಂಡ, ಚಿತ್ರದ ಮೂರನೇ ಹಂತದ ಚಿತ್ರೀಕರಣಕ್ಕಾಗಿ ಭರ್ಜರಿ ತಯಾರಿಯಲ್ಲಿ ತೊಡಗಿದೆ. ಪದವಿಪೂರ್ವ ಚಿತ್ರಕ್ಕಾಗಿ ಅರ್ಜುನ್ ಜನ್ಯ ಸಂಯೋಜಿಸಿರುವ ರಾಗಗಳಿಗೆ ಕನ್ನಡ ಶೋತೃಗಳ ನಿಕಟಕವಿ ಯೋಗರಾಜ್ ಭಟ್ ಸಾಹಿತ್ಯ ರಚಿಸಿದರೆ, ಖ್ಯಾತ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಕಣ್ಚಳಕ ಹಾಗು ಮಧು ತುಂಬಕೆರೆಯ ಸಂಕಲನದ ಕೈಚಳಕ ಚಿತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ.