‘ಪ್ರಾರಂಭ’ ಚಿತ್ರದ ಟ್ರೇಲರ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧ್ವನಿ

`ಪ್ರಾರಂಭ` ಚಿತ್ರದ ಟ್ರೇಲರ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧ್ವನಿ ನೀಡಿ ಶುಭ ಕೋರಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ `ಪ್ರಾರಂಭ` ಚಿತ್ರದ ಟ್ರೇಲರ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧ್ವನಿ ನೀಡಿ ಶುಭ ಕೋರಿದ್ದಾರೆ. ಇದೇ ತಿಂಗಳ 23ರಂದು `ಪ್ರಾರಂಭ` ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಚಿತ್ರದ ಚಿತ್ರೀಕರಣ ಹಾಗೂ ಚಿತ್ರೀಕರಣ ನಂತರದ ಚಟುವಟಿಕೆಗಳು ಮುಕ್ತಾಯವಾಗಿದೆ. ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಗೋವಾ, ಮೂಡಿಗೆರೆ, ಮೈಸೂರು ಮುಂತಾದ ಕಡೆ ಚಿತ್ರಕ್ಕೆ 50ದಿನಗಳ ಚಿತ್ರೀಕರಣ ನಡೆದಿದೆ. ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸುತ್ತಿದ್ದಾರೆ.

‘ಪ್ರಾರಂಭ` ಒಂದು ಅದ್ಭುತ ಕಥಾಹಂದರವಿರುವ ಚಿತ್ರ ಕಥೆಯಲ್ಲಿ ಈ ಸಮಾಜಕ್ಕೆ ಪ್ರತ್ಯೇಕವಾಗಿ ಯುವಕ-ಯುವತಿಯರಿಗೆ ಒಂದು ಒಳ್ಳೆಯ ಸಂದೇಶ ಸಾರುವ ಸಿನಿಮಾ. ನಾಯಕ ಮನೋರಂಜನ್ ರವಿಚಂದ್ರನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕ ಮನು ಕಲ್ಯಾಡಿ ತಿಳಿಸಿದ್ದಾರೆ.  5ಹಾಡುಗಳಿರುವ ಈ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. 2 ಸಾಹಸ ಸನ್ನಿವೇಶಗಳಿದ್ದು , ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಸಾಹಸ ನಿರ್ದೇಶನ ಮಾಡಿದ್ದಾರೆ. ಸುರೇಶ್‍ಬಾಬು ಛಾಯಾಗ್ರಹಣ, ವಿಜಯ್.ಎನ್.ಕುಮಾರ್ ಸಂಕಲನ, ಸಂತು, ಗೀತಾ ನೃತ್ಯ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.  ಈ ಚಿತ್ರದಲ್ಲಿ ಮನೋರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಅಭಿನಯಿಸಿದ್ದಾರೆ. ಉಳಿದಂತೆ ಕಡ್ಡಿಪುಡ್ಡಿ ಚಂದ್ರು, ಹನುಮಂತೇಗೌಡ ರಾಘು ಶ್ರೀವಾಸ್ತವ್, ಶಾಂಭವಿ, ಸೂರಜ್(ಕಾಮಿಡಿ ಕಿಲಾಡಿಗಳು) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಹಿಂದೆ `ಉಪ್ಪು ಹುಳಿ ಖಾರ` ಚಿತ್ರಕ್ಕೆ ಸಂಗೀತ ನೀಡಿದ್ದ, ಪ್ರಜ್ವಲ್ ಪೈ ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಸುರೇಶ್ ಬಾಬು ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಸಂಕಲನ, ವಿಕ್ರಂ ಮೋರ್ ಸಾಹಸ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.