ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ರಮೇಶ್ ಅರವಿಂದ್ ಆರತಕ್ಷತೆ ಸಮಾರಂಭಕ್ಕೆ ಆಹ್ವಾನಿಸಿದ್ದರು.

ಖ್ಯಾತ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ಕಳೆದ ಡಿಸೆಂಬರ್ 28 ರಂದು ಎರಡು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ನೆರವೇರಿತ್ತು.

2021ರ ಜನವರಿ ಎರಡನೇ ವಾರದಲ್ಲಿ ನಿಹಾರಿಕ – ಅಕ್ಷಯ್ ಅವರ ಮದುವೆ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಚಿತ್ರೋದ್ಯಮ, ರಾಜಕೀಯ ಸೇರಿದಂತೆ ನಾನಾ ವಿಭಾಗದ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ರಮೇಶ್ ಅರವಿಂದ್ ಇತ್ತೀಚೆಗೆ ಆರತಕ್ಷತೆ ಸಮಾರಂಭಕ್ಕೆ ಆಹ್ವಾನಿಸಿದ್ದರು.