ಕೌಟುಂಬಿಕ ಹಾಗೂ ಹಾರಾರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕರಾಗಿ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ.
ಕನ್ನಡ ಚಿತ್ರರಂಗದ ಪ್ರಸಿದ್ಧ ನಟಿ ತಾರಾ ಅವರು ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಸಾವಿತ್ರಿ ‘ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. 45 ಕ್ಕೂ ಹೆಚ್ಚು ದಿನಗಳ ಕಾಲ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಪ್ರಸ್ತುತ ಸಂಕಲನ ಕಾರ್ಯ ಬಿರುಸಿನಿಂದ ಸಾಗಿದೆ.
ಪಿ.ಎನ್.ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರಶಾಂತ್ ಕುಮಾರ್ ಮೂಲತಃ ಸಾಫ್ಟ್ ವೇರ್ ಉದ್ಯೋಗಿ.ಎಸ್ ದಿನೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಉಯ್ಯಾಲೆ’ ನಂತರ ಇದು ನಿರ್ದೇಶಕರಿಗೆ ಎರಡನೇ ಚಿತ್ರ.
ಖ್ಯಾತ ಸಾಹಿತಿ ಹೃದಯ ಶಿವ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಗೀತರಚನೆ ಹಾಗೂ ಸಂಭಾಷಣೆ ಕೂಡ ಹೃದಯ ಶಿವ ಅವರದೆ. ಇಷ್ಟು ದಿನ ಗೀತರಚನೆಕಾರರಾಗಿದ್ದ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿದ್ದಾರೆ.
ನಾಗಾರ್ಜುನ ಡಿ ಛಾಯಾಗ್ರಹಣ ಹಾಗೂ ಮನು ಅವರ ಸಂಕಲನ ಈ ಚಿತ್ರಕ್ಕಿದೆ.
ಕೌಟುಂಬಿಕ ಹಾಗೂ ಹಾರಾರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕರಾಗಿ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ. ಊರ್ವಶಿ ರೈ ಈ ಚಿತ್ರದ ನಾಯಕಿ.ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ(ಕಾಮಿಡಿ ಕಿಲಾಡಿಗಳು) ,ಬೇಬಿ ನೈಲಾ ಪ್ರಮೋದ್, ಸ್ವಾತಿ, ಮಾ||ಪುನೀತ್, ಮಾ||ಮಾನ್ವಿಕ್, ಮಾ||ಚಿನ್ಮಯ್, ಬೇಬಿ ಸಂಜನಾ ಹೃದಯಶಿವ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.