ಗಣಪತಿ ಸನ್ನಿಧಿಯಲ್ಲಿ ಶುಗರ್ ಫ್ಯಾಕ್ಟರಿ ಶುರು.

ಈ ಚಿತ್ರದಲ್ಲಿ ಬೆಡಗಿ ಸೊನಾಲ್ ಮಾಂಟೆರೊ , ಚೆಲುವೆ ಅದ್ವಿತಿ ಶೆಟ್ಟಿ ಹಾಗೂ ಗ್ಲಾಮರ್ ಗೊಂಬೆ ಶಿಲ್ಪಾ ಶೆಟ್ಟಿ ‌ನಾಯಕಿಯರಾಗಿ ನಟಿಸುತ್ತಿದ್ದಾರೆ.

ಲವ್ ಮಾಕ್ಟೇಲ್ಖ್ಯಾತಿಯ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಶುಗರ್ ಫ್ಯಾಕ್ಟರಿ ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮೀ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಜನವರಿ 28ರಂದು ನೆರವೇರಿತು. ಮೊದಲ ದೃಶ್ಯಕ್ಕೆ ತರುಣ್ ಸುಧೀರ್ ಕಿಶೋರ್ ಆರಂಭ ಫಲಕ ತೋರಿದರು. ‌ಜಿ.ಹೆಚ್.ರಾಮಚಂದ್ರ ಅವರು‌ ಕ್ಯಾಮೆರಾ ಚಾಲನೆ ಮಾಡಿದರು.
ನಟಿ ಅಮೂಲ್ಯ, ಜಗದೀಶ್, ಲಾಸ್ಟ್ ಬಸ್ ಅರವಿಂದ್, ಮಯೂರ್ ಪಟೇಲ್ ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಇದೇ ತಿಂಗಳ 29ರಿಂದ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ ನಟಿ ಅಮೂಲ್ಯಸೋದರ
ದೀಪಕ್ ಅರಸ್ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ.. ಈ ಚಿತ್ರದಲ್ಲಿ ಬೆಡಗಿ ಸೊನಾಲ್ ಮಾಂಟೆರೊ , ಚೆಲುವೆ ಅದ್ವಿತಿ ಶೆಟ್ಟಿ ಹಾಗೂ ಗ್ಲಾಮರ್ ಗೊಂಬೆ ಶಿಲ್ಪಾ ಶೆಟ್ಟಿ ‌ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಗೋವಿಂದೇ ಗೌಡ, ಸೂರಜ್ ಕುಮಾರ್, ಮಹಾಂತೇಶ್(ಹೊಸ ಪರಿಚಯ), ಪವನ್ ಎಸ್ ನಾರಾಯಣ್, ಬ್ರೋ ಗೌಡ, ರಾಯಲ್ ರವಿ, ಅವೀಕ್ಷ, ನೀತೂ ರಾಯ್, ಡಿ.ಜಿ.ವಿಂಪಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ಧಾರೆ.

ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌ ಚಿತ್ರದಲ್ಲಿ ಏಳು ಹಾಡುಗಳನ್ನು ಚೇತನ್ ಕುಮಾರ್ , ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಅರಸು ಅಂತಾರೆ, ಚಂದನ್ ಶೆಟ್ಟಿ, ರಾಘವೇಂದ್ರ ಕಾಮತ್ ಬರೆಯುತ್ತಿದ್ದಾರೆ ‌ ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ‌ಧನಂಜಯ್ ಅವರ ನೃತ್ಯ ನಿರ್ದೇಶನವಿರುವ ‘ಶುಗರ್ ಫ್ಯಾಕ್ಟರಿ’ ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ.