ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಲಿರುವ ನೂತನ ಚಿತ್ರ 2021ರ ಜನವರಿಯಲ್ಲಿ ಆರಂಭವಾಗಲಿದೆ.
100 cr ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾವಿದು. ಮಾಸ್ಟರ್ ಪೀಸ್ ಖ್ಯಾತಿಯ ಮಂಜು ಮಾಂಡವ್ಯ ಈ ಅದ್ದೂರಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಉಪೇಂದ್ರ – ಮಂಜು ಮಾಂಡವ್ಯ ಕಾಂಬಿನೇಶನಲ್ಲಿ ಮೂಡಿಬರಲಿರುವ ಈ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಯಿದೆ. ನಿಮಿಷಾಂಬ ಪ್ರೊಡಕ್ಷನ್ಸ್ ಲಾಂಛನದಲ್ಲಿ ಅಣ್ಣಯ್ಯ ಚಂದ್ರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಹಿಂದೆ ಅಣ್ಣಯ್ಯ, ಕರ್ಪುರದ ಗೊಂಬೆ, ಏನೋ ಒಂಥರ, ಬಿಂದಾಸ್, ರನ್ನ ದಂತಹ ಸೂಪರ್ ಹಿಟ್ ಚಿತ್ರಗಳನ್ನು ಅಣ್ಣಯ್ಯ ಚಂದ್ರು ನಿರ್ಮಿಸಿದ್ದಾರೆ.
ಉಪೇಂದ್ರ ಅವರಿಗೆ ಈ ಚಿತ್ರದ ಕಥೆ ಬಹಳ ಇಷ್ಟವಾಗಿದ್ದು ಮುಂದಿನ ಜನವರಿಯಿಂದಲೇ ಚಿತ್ರ ಪ್ರಾರಂಭ ಮಾಡೋಣ ಎಂದಿದ್ದಾರಂತೆ. ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯ, ನಂತರ ನಿರ್ದೇಶಕರಾಗೂ ಜನಪ್ರಿಯರಾದವರು.
ಅವರೆ ಈ ನೂತನ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ತಿಳಿಸುವುದಾಗಿ ಮಂಜು ಮಾಂಡವ್ಯ ತಿಳಿಸಿದ್ದಾರೆ. ಈ ಸುದ್ದಿ ಇಷ್ಟವಾದಲ್ಲಿ ಇದನ್ನು ಲೈಕ್ ಮಾಡಿ ಶೇರ್ ಮಾಡಿ ಹಾಗು ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ತಪ್ಪದೆ ತಿಳಿಸಿ. ಕನ್ನಡ ಚಿತ್ರಗಳ ಬಗ್ಗೆ, ಕನ್ನಡ ನಾಡಿನ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ತಪ್ಪದೆ ಲೈಕ್ ಮಾಡಿರಿ.